ಇದು ನನ್ನ ಪ್ರಥಮ ಅಕ್ಷರಾಭ್ಯಾಸ ಕನ್ನಡ ತನ್ನರಹು (ಬ್ಲಾಗ್) ಲೋಕದೊಳಗೆ.
ಕನ್ನಡಮ್ಮನಿಗೆ ನನ್ನ ಪುಟ್ಟ ಅಳಿಲು ಸೇವೆ.
ನಿಮ್ಮ ಮನೆಮನೆಗಳಲ್ಲಿ,ಮನಮನಗಳಲ್ಲಿ ಡಿ. ಎಸ್. ಕರ್ಕಿ ಯವರು ಹಚ್ಚಿರುವ ನಾಡದೀಪ ಯಾವಾಗಲೂ ಬೆಳಗುತ್ತಿರಲಿ ಎಂದು ಆಶಿಸುತ್ತಾ,
ಹಚ್ಚೇವು ಕನ್ನಡದ ದೀಪ
ಕರುನಾಡ ದೀಪ ಸಿರಿನುಡಿಯ ದೀಪ
ಒಲವೆತ್ತಿ ತೋರುವ ದೀಪ
ಬಹುದಿನಗಳಿಂದ ಮೈಮರೆವೆಯಿಂದ
ಕೂಡಿರುವ ಕೊಳೆಯ ಕೊಚ್ಚೇವು
ಎಲ್ಲೆಲ್ಲಿ ಕನ್ನಡದ ಕಂಪು ಸೂಸಲು
ಅಲ್ಲಲ್ಲಿ ಕರಣ ಚಾಚೇವು
ನಡುನಾಡೆ ಇರಲಿ ಗಡಿನಾಡೆ ಇರಲಿ
ಕನ್ನಡದ ಕಳೆಯ ಕೆಚ್ಚೇವು
ಮರೆತೇವು ಮರೆವ ತೆರೆದೇವು ಮನವ
ಎರೆದೇವು ಒಲವ ಹಿಡಿನೆನಪಾ
ನರನರವನೆಲ್ಲ ಹುರಿಗೊಳಿಸಿ ಹೊಸೆದು ಹಚ್ಚೇವು ಕನ್ನಡದ ದೀಪ.
ಕಲ್ಪನೆಯ ಕಣ್ಣು ಹರಿವನಕ ಸಾಲು
ದೀಪಗಳ ಬೆಳಕ ಬೀರೇವು
ಹಚ್ಚಿರುವ ದೀಪದಲಿ ತಾಯರೂಪ
ಅಚ್ಚಳಿಯದಂತೆ ತೋರೇವು
ಒಡಲೊಳಲ ಕೆಚ್ಚಿನ ಕಿಡಿಗಳನ್ನು
ಗಡಿನಾಡಿನಾಚೆ ತೂರೇವು
ಹೊಮ್ಮಿರಲು ಪ್ರೀತಿ ಎಲ್ಲಿಯದು ಭೀತಿ
ನಾಡೊಲವೆ ನೀತಿ ಹಿಡಿನೆನಪಾ
ಮನೆಮನೆಗಳಲ್ಲಿ ಮನಮನಗಳಲ್ಲಿ ಹಚ್ಚೇವು ಕನ್ನಡದ ದೀಪ.
ನಮ್ಮವರು ಗಳಿಸಿದ ಹೆಸರುಳಿಸಲು
ಎಲ್ಲಾರು ಒಂದುಗೂಡೇವು
ನಮ್ಮೆದೆಯ ಮಿಡಿಯುವೀ ಮಾತಿನಲ್ಲಿ
ಮಾತೆಯನು ಪೂಜೆಮಾಡೇವು
ನಮ್ಮುಸಿರು ತೀಡುವೀ ನಾಡಿನಲ್ಲಿ
ಮಾಂಗಲ್ಯಗೀತ ಹಾಡೇವು
ತೊರೆದೇವು ಮರುಳ ಕಡೆದೇವು ಇರುಳ
ಪಡೆದೇವು ತಿರುಳ ಹಿಡಿನೆನಪಾ
ಒಲವೆತ್ತಿ ತೋರುವ ದೀಪ
ಬಹುದಿನಗಳಿಂದ ಮೈಮರೆವೆಯಿಂದ
ಕೂಡಿರುವ ಕೊಳೆಯ ಕೊಚ್ಚೇವು
ಎಲ್ಲೆಲ್ಲಿ ಕನ್ನಡದ ಕಂಪು ಸೂಸಲು
ಅಲ್ಲಲ್ಲಿ ಕರಣ ಚಾಚೇವು
ನಡುನಾಡೆ ಇರಲಿ ಗಡಿನಾಡೆ ಇರಲಿ
ಕನ್ನಡದ ಕಳೆಯ ಕೆಚ್ಚೇವು
ಮರೆತೇವು ಮರೆವ ತೆರೆದೇವು ಮನವ
ಎರೆದೇವು ಒಲವ ಹಿಡಿನೆನಪಾ
ನರನರವನೆಲ್ಲ ಹುರಿಗೊಳಿಸಿ ಹೊಸೆದು ಹಚ್ಚೇವು ಕನ್ನಡದ ದೀಪ.
ಕಲ್ಪನೆಯ ಕಣ್ಣು ಹರಿವನಕ ಸಾಲು
ದೀಪಗಳ ಬೆಳಕ ಬೀರೇವು
ಹಚ್ಚಿರುವ ದೀಪದಲಿ ತಾಯರೂಪ
ಅಚ್ಚಳಿಯದಂತೆ ತೋರೇವು
ಒಡಲೊಳಲ ಕೆಚ್ಚಿನ ಕಿಡಿಗಳನ್ನು
ಗಡಿನಾಡಿನಾಚೆ ತೂರೇವು
ಹೊಮ್ಮಿರಲು ಪ್ರೀತಿ ಎಲ್ಲಿಯದು ಭೀತಿ
ನಾಡೊಲವೆ ನೀತಿ ಹಿಡಿನೆನಪಾ
ಮನೆಮನೆಗಳಲ್ಲಿ ಮನಮನಗಳಲ್ಲಿ ಹಚ್ಚೇವು ಕನ್ನಡದ ದೀಪ.
ನಮ್ಮವರು ಗಳಿಸಿದ ಹೆಸರುಳಿಸಲು
ಎಲ್ಲಾರು ಒಂದುಗೂಡೇವು
ನಮ್ಮೆದೆಯ ಮಿಡಿಯುವೀ ಮಾತಿನಲ್ಲಿ
ಮಾತೆಯನು ಪೂಜೆಮಾಡೇವು
ನಮ್ಮುಸಿರು ತೀಡುವೀ ನಾಡಿನಲ್ಲಿ
ಮಾಂಗಲ್ಯಗೀತ ಹಾಡೇವು
ತೊರೆದೇವು ಮರುಳ ಕಡೆದೇವು ಇರುಳ
ಪಡೆದೇವು ತಿರುಳ ಹಿಡಿನೆನಪಾ
ಕರುಳೆಂಬ ಕುಡಿಗೆ ಮಿಂಚನ್ನೆ ಮುಡಿಸಿ ಹಚ್ಚೇವು ಕನ್ನಡದ ದೀಪ.
- ಡಿ. ಎಸ್. ಕರ್ಕಿ
No comments:
Post a Comment